"ಮಹೇಶ ನನಗೊಂದು ಟವಲು ಹಾಕಿಬಿಡಿ.."
"ಅಣ್ಣ ಆಗಲೇ ಹಾಕಾಯ್ತು.. "
"ಅರೆ ನಾ ಈಗ ತಾನೇ ಹೇಳಿದ್ದು!!!"
"ನಿಮಗೋಸ್ಕರ ಟವಲ್ ಅಲ್ಲಿ ಹಾಕಿಬಿಟ್ಟಿದ್ದೇನೆ.." ಜೋರಾದ ನಗು..
ನನ್ನ ಪಾಲಿಗೆ ಹೀಗೆ ಶುರುವಾಗಿದ್ದು.. ಪದಕಮ್ಮಟದ ನಾಲ್ಕನೇ ಆವೃತ್ತಿ..
ಚುಮುಚುಮು ಚಳಿಯಲ್ಲಿ ನಾಯಂಡಹಳ್ಳಿ ಮೆಟ್ರೋ ನಿಲ್ದಾಣದ ಹತ್ತಿರ ನಾನು ಗುರು, ಮತ್ತೆ ಗುರು ಜೂನಿಯರ್ ನಿಂತಿದ್ವಿ.. ನಾಗ್ ಅಲಿಯಾಸ್ ನಾಗೇಂದ್ರ ಬಂದ್ರು.. ಉಮೇಶ್ ಸರ್ ಬಂದ್ರು.. ಸಮರ್ಥ್ ನಮಗೆ ಕೊಂಚ ಮುಂಚೆ ಸಿಕ್ಕಿದ್ರು.. ಮಹೇಶ ಇದ್ದ ಟೆಂಪೋ ಟ್ರಾವೆಲ್ಲರ್ ನಮ್ಮ ಬಳಿ ಬಂದು ನಿಲ್ತು.. ಉಭಯಕುಶಲೋಪರಿ ಸಾಂಪ್ರತ ಮಾಡುತ್ತಲೇ.. ಒಳಗೆ ನುಗ್ಗಿದೆವು..
ಶ್ರೀ ರಾಜಕುಮಾರ್ ಅವರು ಆಗಲೇ ಆಸೀನರಾಗಿದ್ದರು.. ಪರಿಚಯವಾದ ನಂತರ ನಮ್ಮ ಬಂಡಿ ಹೊರಟಿತು.. ಇನ್ನೊಂದು ಬಂಡಿಯಲ್ಲಿ ಪ್ರವೀಣ್ ಭಟ್ ಸಂಪ, ಮಲ್ಲೇಶ, ಶ್ರೀನಿಧಿ ಸರ್, ಮೇಡಂ ಒಬ್ಬರು, ಚೌಡಯ್ಯ ಇದ್ದರು.. ಶ್ರೀರಂಗಪಟ್ಟಣದಲ್ಲಿ ಸಿಗೋಣ ಅಂತ ಗಾಡಿ ಬರ್ ಅಂತ ಹೊರಟೆ ಬಿಟ್ಟಿತು..
ಮಾತು ಮಾತು ಮಾತು ಬರಬಿಡದೆ ಸಾಗಿತ್ತು ಮಾತಿನ ಲಹರಿ.. ನಾಲ್ಕು ದಿನದ ಹಿಂದಷ್ಟೇ ಬಿಡುಗಡೆಯಾಗಿ ಬಾರಿ ಸದ್ದು ಮಾಡುತ್ತಿದ್ದ ಕೆ.ಜಿಎಫ್ ಚಿತ್ರದಿಂದ ಮಾತು ಆರಂಭವಾಯಿತು.. ಪ್ರಪಂಚದ ಎಲ್ಲಾ ವಿಷಯಗಳ ಬಗ್ಗೆ ಚರ್ಚೆ, ಹಾಸ್ಯ ಸಾಗಿತ್ತು..
ರಾಹುಲ್ ದ್ರಾವಿಡ್ ನನ್ನ ಇಷ್ಟದ ಆಟಗಾರ.. ಯಾವ ಪಿಚ್ ಇರಲಿ, ಯಾವುದೇ ಬೌಲರ್ ಇರಲಿ, ತಾಳ್ಮೆಯಿಂದ ಅದಕ್ಕೆ ತಕ್ಕ ಆಟವಾಡುತ್ತಿದ್ದರು.. ನಮ್ಮ ಬಂಡಿಯಲ್ಲಿದ್ದ ರಾಜಕುಮಾರ್ ಕೂಡ ಹಾಗೆ.. ಕ್ರಿಕೆಟ್, ಸಿನಿಮಾ, ಚುನಾವಣೆ, ರಾಜಕೀಯ, ಸಾಮಾನ್ಯ ವಿಷಯ ಯಾವುದೇ ಇರಲಿ ಅದ್ಭುತವಾಗಿ ಮಾತಾಡುತ್ತಿದ್ದರು.. ನಾನೂ ಮಾತಾಡುತ್ತಲೇ ಯೋಚಿಸುತ್ತಿದ್ದೆ ಯಾವ ವಿಷಯ ಮಾತಾಡೋಣ ಅಂತ.. ಶ್ರೀರಂಗ ಪಟ್ಟಣ ಬರುವ ತನಕ ಯೋಚಿಸುತ್ತಲೇ ಇದ್ದೆ.. ಕಾರಣ ಅಂಬರದ ಕೆಳಗೆ ಯಾವ ವಿಷಯವೇ ಆದರೂ ಅದ್ಭುತವಾಗಿ ಮಾಹಿತಿ ನೀಡುತ್ತಿದ್ದರು..
ಪದಕಮ್ಮಟದ ತಾಣಕ್ಕೆ ಬಂದೆವು.. ಆಗಲೇ ಬಿರುಸಿನ ಚಟುವಟಿಕೆ ನೆಡೆದಿತ್ತು..
 |
ಪದಕಮ್ಮಟದ ತಾಣ |
ಸೊಗಸಾದ ಇಡ್ಲಿ, ವಡೆ, ಮತ್ತು ಪೊಂಗಲ್. .ಆಹಾ ಖಾರವಾದ ಚಟ್ನಿ.. ಸೂಪರ್ ಇತ್ತು.. ಆ ಚಳಿಗೆ ಮೆಣಸು ಸಿಗುತ್ತಿದ್ದ ಪೊಂಗಲ್ ಎರಡು ರೌಂಡ್ ಬಾರಿಸಿದೆವು..
 |
ಚಳಿಗೆ ರುಚಿಕರವಾದ ತಿನಿಸು |
ಅಲ್ಲಿ ನೆಡೆಯುತ್ತಿದ್ದ ಸಿದ್ಧತೆಗಳಿಗೆ ನಾವು ಒಂದಷ್ಟು ಕೈಜೋಡಿಸಿದೆವು.. ಬಂದವರು ಸ್ವಾಗತ ಕಟ್ಟೆಯಲ್ಲಿ ನೋಂದಣಿ ಮಾಡಿಕೊಂಡು ಕಿರುಹೊತ್ತಿಗೆ, ಲೇಖನಿಗಳನ್ನ ತೆಗೆದುಕೊಂಡು ಆಸೀನರಾಗುತ್ತಿದ್ದರು ..ಬಂದವರ ಜೊತೆ ಮಾತು, ಒಂದು ಸೆಲ್ಫಿ.. ನಗು, ಹಾಸ್ಯ ಸಾಗಿತ್ತು..
 |
ಆಲ್ವಾ.. ವಿಶ್ವಾಸವೇ ಪ್ರಗತಿಯ ಕಿರಣ!!! |
 |
ಸ್ವಾಗತ ಕಟ್ಟೆ |
 |
ಬಂದ ಗೆಳೆಯರು |
 |
ಗುರುತಿನ ಬಿಲ್ಲೆ ಲಗತ್ತಿಸಿದ ಸಮಯ |
ಹಿರೇಮಗಳೂರಿನಿಂದ ಶ್ರೀ ಕಣ್ಣನ್ ಅವರು ಬರುವವರಿದ್ದರು.. ಅವರ ಬರುವಿಕೆಗಾಗಿ ಎಲ್ಲರೂ ಎದುರು ನೋಡುತ್ತಿದ್ದರು.. ಆ ಕ್ಷಣ ಬಂದೆ ಬಿಟ್ಟಿತು.. ಎಲ್ಲರೂ ಅವರನ್ನು ಸ್ವಾಗತಿಸಿ ಆಜಾದ್ ಸರ್ ಪದಕಮ್ಮಟದ ನೆನಪಿನ ಬಿಲ್ಲೆಯನ್ನು ಅವರ ಕೋಟಿಗೆ ಸಿಕ್ಕಿಸಿದಾಗ ಕಾರ್ಯಕ್ರಮಕ್ಕೆ ಒಂದು ಮಿಂಚಿನ ಗತಿ ಬಂದಿತು..
ಬಾಲು ಸರ್ ಅವರ ಸ್ಫೂರ್ತಿಯುತ ಸಿದ್ಧತೆ, ಮತ್ತು ಅದಕ್ಕೆ ಬೇಕಾದ ಸಲಕರಣೆಗಳು ಮತ್ತು ಸಹಾಯ ಹಸ್ತ ನೀಡುವವರು ಇದ್ದದರಿಂದ ಎಲ್ಲವೂ ಸುಗವಾಗಿ ಸಾಗಿತ್ತು.. ವೇದಿಕೆಗೆ ಮುಖ್ಯ ಅತಿಥಿಗಳನ್ನು ಸ್ವಾಗತಿಸಿದರು.. ಸುಸ್ವರದ ಗಾಯಕರಿಂದ ನಾಡಗೀತೆಯೊಂದಿಗೆ ಪದಕಮ್ಮಟದ ನಾಲ್ಕನೇ ಆವೃತ್ತಿ ಆರಂಭವಾಯಿತು.. ಶ್ರೀಮತಿ ವಾಣಿ ಅವರಿಂದ ಪ್ರಾರ್ಥನೆ ಗೀತೆ ಸೊಗಸಾಗಿತ್ತು..
 |
ಪ್ರಾರ್ಥನೆ ಗೀತೆ - ಶ್ರೀಮತಿ ವಾಣಿ ಅವರಿಂದ |
ಸಭಾಂಗಣ ತುಂಬುತ್ತಲೇ ಇತ್ತು.. ಸ್ವಾಗತ ಕಟ್ಟೆಯಲ್ಲಿ ನೋಂದಣಿ ಮಾಡಿಕೊಳ್ಳುವವರ ಸಂಖ್ಯೆ ಏರುತ್ತಲೇ ಇತ್ತು.. ತಿಂಡಿ ಕಾಫಿ ಸಾಗಿತ್ತು.. ಜ್ಯೋತಿಯ ಬೆಳಗುವ ಮೂಲಕ ಸಾಂಕೇತಿಕವಾಗಿ ಶುರುವಾದ ಕಮ್ಮಟ ಸರಾಗವಾಗಿ ಸಾಗಿತು..
 |
ದೀಪಂ ಜ್ಯೋತಿ ಪರಬ್ರಹ್ಮ |
ಶ್ರೀ ಜೆಬಿಆರ್ ಸರ್ ಅವರಿಂದ ಪ್ರಾಸ್ತಾವಿಕ ಭಾಷಣ ಮತ್ತು ಶ್ರೀ ನಾಗೇಂದ್ರ ಅವರಿಂದ ನಿರೂಪಣೆ ಒಳಗೊಂಡಿತ್ತು
 |
ನಾಗ್ ಅಲಿಯಾಸ್ ನಾಗೇಂದ್ರ ನಿರೂಪಣೆಯಲ್ಲಿ |
 |
ಜೆಬಿಆರ್ ಸರ್.. ಸುಂದರ ಮಾತಿನ ಶುರುವಾತು |
ಶ್ರೀ ಕಣ್ಣನ್ ಅವರ ಜಲಲ ಜಲಲ ಧಾರೆಯ ನೆರೆ ಆ ಅಂಗಣವನ್ನು ತುಂಬಿತ್ತು.. ಸುಮಾರು ಒಂದು ಒಂದೂವರೆ ಘಂಟೆಗಳ ಕಾಲ ಅದ್ಭುತವಾಗಿ ಮಾತಾಡಿದ ಮಹನೀಯರು.. ಸುಮಾರು ಎರಡು ಸಾವಿರ ವರ್ಷಗಳ ಕಾಲಕ್ಕೆ ನಮ್ಮನ್ನು ಹಾಸ್ಯ ಬಂಡಿಯಲ್ಲಿ ಕೊಂಡೊಯ್ದದ್ದೆ ಅಲ್ಲದೆ.. ಕರುನಾಡಿನ ಭಾಷೆಯ ಎಲ್ಲೆಗಳನ್ನು ಪರಿಚಯಿಸಿದರು.. ಆಡು ಭಾಷೆ, ಗ್ರಾಮ್ಯ ಭಾಷೆ, ಶುದ್ಧ ಭಾಷೆ ಹೀಗೆ ಹತ್ತಾರು ವಿಧಗಳನ್ನು ಘಟನೆಗಳ ಆಧಾರದ ಮೇಲೆ ಹೇಳಿದ್ದು, ಅದಕ್ಕೆ ಹಾಸ್ಯ ಲೇಪನ ಬೆರೆಸಿದ್ದು ಸೊಗಸಾಗಿತ್ತು.. ಅಕ್ಷರಶಃ ಮಂತ್ರ ಮುಗ್ಧರಾಗಿ ಕೂತಿದ್ದವರೆಲ್ಲ ಮಾತು ಮುಗಿದಾಗ ಜೋರಾದ ಚಪ್ಪಾಳೆ ತಟ್ಟಬೇಕೆಂದು ಮರೆತುಹೋಗುವಷ್ಟು ತನ್ಮಯತೆಯಿಂದ ಇದ್ದರು.. ನಾ ಇಲ್ಲಿಗೆ ಮಾತು ಮುಗಿಸುತ್ತಿದ್ದೇನೆ.. ಶುಭವಾಗಲಿ ಎಂದಾಗಲೇ ಅರೆ ಮಾತು ಇಷ್ಟು ಬೇಗ ಮುಗಿದು ಹೋಯಿತೇ ಎಂದು ಅಚ್ಚರಿಪಡುವ ಹಾಗೆ ಆಗಿತ್ತು..
ಪದಗಳ ನೆರೆ
ಪದಗಳ ಪ್ರವಾಹ
ಪದಗಳ ಬಿರುಗಾಳಿ
ಪದಗಳ ಮಳೆಯನ್ನೇ ಹರಿಸಿದ ಆ ಸಮಯ ಅದ್ಭುತ ಎನ್ನಬಹುದು..
ಪದಕಮ್ಮಟದ ಸ್ಮರಣಿಕೆಯನ್ನು ಬಿಡುಗಡೆ ಮಾಡಿ ಎಲ್ಲರಿಗೂ ಹಂಚಿದರು... ಆ ಸ್ಮರಣಿಕೆಯನ್ನು ಸಿದ್ಧಪಡಿಸಿದ ಸಹಾಯ ಹಸ್ತಗಳಿಗೆ ನಮನ ಸಲ್ಲಿಸುತ್ತಾ ರಕ್ಷಾಪುಟವನ್ನು ಸಿದ್ಧಪಡಿಸಿದ ಸೃಷ್ಟಿಕರ್ತರಿಗೆ ಒಂದು ಸಲಾಂ ಹೇಳಿ ಕಾರ್ಯಕ್ರಮಕ್ಕೆ ತಿರುವು ನೀಡಿದರು..
 |
ಸ್ಮರಣಿಕೆ ಬಿಡುಗಡೆ ಮಾಡಿದ ಸಮಯ |
ಅಲ್ಲಿಂದ ಶ್ರೀ ಕೊರ್ಗಿ ಶಂಕರನಾರಾಯಣ ಉಪಾಧ್ಯಾಯ ಅವರಿಂದ ಭಾಷೆ ವಿನಿಯೋಗ.. ... ಭಾಷೆ ಬೆಳೆದು ಬಂದಂತ ಹಾದಿ, ಅದಕ್ಕೆ ಇನ್ನೊಂದು ರೂಪ.. ಹೀಗೆ ತಮ್ಮ ಮೂಸೆಯಲ್ಲಿದ್ದ ವಿಷಯಗಳನ್ನು ಬಂದಿದ್ದವರಿಗೆ ತಲುಪಿಸಿದರು.. ಸೊಗಸಾದ ಕಾರ್ಯಕ್ರಮ ಹಂತಹಂತವಾಗಿ ಮೇಲೇರುತ್ತಿತ್ತು.. ಯಶ್ವಸಿಯಾಗುತ್ತಿತ್ತು..
 |
ಶ್ರೀ ಶಂಕರ್ ನಾರಾಯಣ ಅವರ ಮಾತುಗಳು ಸೊಗಸು |
ಪ್ರಶ್ನೆ ಉತ್ತರಗಳ ಸಂವಾದ ನೆಡೆಯಿತು.. ತಮ್ಮ ಸಂದೇಹಗಳಿಗೆ ಉತ್ತರದ ಪೋಷಾಕುಗಳನ್ನು ಹೊದ್ದಿಸಿ ಸಂತಸ ಪಟ್ಟರು.
ಮುಂದೆ ಇದ್ದದ್ದು ಇದುವರೆಗೂ ಉತ್ತರ ಪ್ರದೇಶಕ್ಕೆ ಹೋಗಿದ್ದ ನಾವೆಲ್ಲರೂ ಮಧ್ಯ ಪ್ರದೇಶದ ಕರೆಗೆ ಓಗೊಟ್ಟು.. ಬಿಸಿ ಬೇಳೆ ಬಾತು, ಮೊಸರನ್ನ, ಉಪ್ಪಿನಕಾಯಿ, ಲಾಡುಗಳನ್ನು ಬೇಸರಿಸದೆ ಅದಕ್ಕೆ ದಾರಿ ತೋರಿಸಿದೆವು..
 |
ಪುಷ್ಕಳ ಭೋಜನ |
ಇದರ ಮಧ್ಯೆ .. ಬಂದಿದ್ದವರ ಸ್ವ ಪರಿಚಯ ನೆಡೆಯಿತು.. ಊಟವಾದ ಮೇಲೆ. ... ನಾವು ಹೊರಟಿದ್ದು ಗಮಕದ ಶಾಲೆಗೇ.. ಶ್ರೀಮತಿ ವಿಜಯಮಾಲ ರಂಗನಾಥ್ ಅವರ ದನಿಯಲ್ಲಿ ಗಮಕದ ವಾತಾವರಣಕ್ಕೆ ಜಾರಿದೆವು..
 |
ಗಮಕಿ ಮೇಡಂ ವಿಜಯಮಾಲ ರಂಗನಾಥ್ |
ಶ್ರೀ ಅನಾರ್ಕಲಿ ಸಲೀಮ್ ಅವರ ಮಾತುಗಳು.. ಅವರ ಪರಿಶ್ರಮ ಪದಕಮ್ಮಟದ ಯಶಸ್ಸಿಗೆ ಒಂದು ಕಾರಣ..
 |
ಅನಾರ್ಕಲಿ ಸಲೀಂ ಮಾತುಗಳು ಸೂಪರ್ |
ಮಾಧ್ಯಮದ ಪ್ರತಿನಿಧಿಗಳು ಇಡೀ ದಿನ ನಮ್ಮ ಜೊತೆ ಇದ್ದದ್ದು ವಿಶೇಷವಾಗಿತ್ತು..
 |
ಸುದ್ದಿಗಳು ಪಸರಿಸುವುದೇ ಇವರಿಂದ ಅಲ್ಲವೇ |
ಪುಸ್ತಕಗಳ ಸಾಮ್ರಾಟ್ ಎಂದೇ ಹೆಸರಾದ ಪುಸ್ತಕದ ಮನೆಯ ಶ್ರೀ ಅಂಕೇಗೌಡರು ಆಗಮಿಸಿದ್ದು ಪದಕಮ್ಮಟಕ್ಕೆ ಭೂಷಣವೆನಿಸಿತು. ಹತ್ತಲ್ಲ, ನೂರಲ್ಲ, ಸಾವಿರವಲ್ಲ, ಲಕ್ಷಗಟ್ಟಲೆ ಪುಸ್ತಕಗಳನ್ನು ಹೊಂದಿರುವ ಇವರು ನಿಜಕ್ಕೂ ಸರಸ್ವತಿ ಪುತ್ರರೇ ಹೌದು..
 |
ಶ್ರೀ ಅಂಕೇಗೌಡರು |
 |
ಹ ಹ ಹ.. ಕಾರ್ಯಕ್ರಮದ ಪಟಗ್ರಾಹಿಗಳು (ಅಜಾದ್ ಸರ್ ಮಾತಿನಲ್ಲಿ) |
ಅಧ್ಯಕ್ಷತೆ ವಹಿಸಿದ್ದ ಶ್ರೀ ವಸಂತ್ ಕುಮಾರ್ ಪೆರ್ಲ ಅವರಿಂದ ಪದಕಮ್ಮಟಕ್ಕೆ ಶುಭನುಡಿಗಳು .. ಇಡೀ ದಿನದ ಕಾರ್ಯಕ್ರಮವನ್ನು ತಮ್ಮ ಅನುಭವದ ಮೂಸೆಯಲ್ಲಿ ರೂಪಿಸಿದ್ದು ಸೊಗಸಾಗಿತ್ತು.. ಅತಿಥಿಗಳ ಜೊತೆಯಲ್ಲಿ ಮಾತುಕತೆ, ಸಂವಾದ ಕಾರ್ಯಕ್ರಮದಲ್ಲಿ ಉತ್ತಮವಾಗಿ ತೊಡಗಿಸಿಕೊಂಡಿದ್ದ ಅಧ್ಯಕ್ಷರಿಗೆ ಧನ್ಯವಾದಗಳು.
 |
ಶ್ರೀ ವಸಂತ್ ಕುಮಾರ್ ಪೆರ್ಲ ಸರ್ |
ಶ್ರೀ ಆಜಾದ್ ಅವರಿಂದ ಪದಕಮ್ಮಟದ ಬಗ್ಗೆ ಒಂದು ಸಿಂಹಾವಲೋಕನ.. ಮತ್ತೆ ಈ ಕಾರ್ಯಕ್ರಮಕ್ಕೆ ಸಹಾಯ ಹಸ್ತಗಳನ್ನು ನೀಡಿದ ಎಲ್ಲರಿಗೂ ಒಂದು ನೆನಪಿನ ಕಾಣಿಕೆ ಕೊಟ್ಟು ಗೌರವಿಸುವುದರಿಂದ ಈ ಕಾರ್ಯಕ್ರಮ ಸಂಪನ್ನವಾಯಿತು...
 |
ಶಕ್ತಿ ಅಜಾದ್ ಸರ್ |
 |
ಸಭಾಂಗಣದ ನೋಟ |
 |
ಸಭಾಂಗಣದ ನೋಟ |
ಇದರ ಮಧ್ಯದಲ್ಲಿ ಬಾಲು ಸರ್ ಈ ಕಾರ್ಯಕ್ರಮದ ಯಶಸ್ಸಿಗೆ ಮತ್ತು ಅತಿಥಿಗಳನ್ನು ಆಹ್ವಾನಿಸುವ ಜವಾಬ್ಧಾರಿ ಹೊತ್ತಿದ್ದ ಸಹಾಯ ಹಸ್ತಗಳಿಗೆ ಅಭಿನಂದನೆ ಹಾಗೂ ಧನ್ಯವಾದಗಳನ್ನು ಸಲ್ಲಿಸಿದರು.. ಹಾಗೆಯೇ ಸಾಮಾಜಿಕ ಜಾಲತಾಣಗಳನ್ನು ಹೇಗೆ ಉಪಯುಕ್ತವಾಗಿ ಸಮಾಜಕ್ಕೆ ಒಂದು ಕೊಡುಗೆಯಾಗಿ ನೀಡಬಹುದು ಮತ್ತು ಭಾಷೆಯ ಉಪಯುಕ್ತತೆಯನ್ನು ಹೇಗೆ ತಲುಪಿಸಬಹುದು ಎನ್ನುವುದನ್ನು ತಿಳಿಸಿದರು..
 |
ಕಾರ್ಯಕ್ರಮದ ಸಜ್ಜಿಕೆಯ ರೂವಾರಿ ಮತ್ತು ಶಕ್ತಿ |
ಬಂದವರನ್ನೆಲ್ಲ ಒಂದು ಚೌಕಟ್ಟಿನಲ್ಲಿ ಬಂಧಿಸಬೇಕೆಂಬ ನಮ್ಮೆಲ್ಲರ ಹಂಬಲಕ್ಕೆ ತಲೆಬಾಗಿ ವೇದಿಕೆಯನ್ನು ಆಕ್ರಮಿಸಿಕೊಂಡೆವು.. ಒಂದು ಸುಂದರ ಗುಂಪಿನ ಸೊಗಸಾದ ಚಿತ್ರ ನಮ್ಮೆಲ್ಲರ ಕಣ್ಮನಗಳಲ್ಲಿ ದಾಖಲಾಯಿತು..
 |
ಒಂದು ಗುಂಪು.. ಪದಕಮ್ಮಟದ ಗುಂಪು |
ಸಪ್ಪೆ ಎನಿಸಿತಾ.. ಇರಿ ಸರ್.. ಇದು ಪದಕಮ್ಮಟದ ಕಾರ್ಯಕ್ರಮ ವಿವರ..
ಮುಂದೈತೆ ತಮಾಸೆ ಅಬ್ಬಾ!!!
ತುಂಟ ಸದಸ್ಯರ ಗುಂಪೇ ಇರುವಾಗ ಹಾಸ್ಯಕ್ಕೆ ಕೊರತೆಯೇ.. ಮಲೆನಾಡಿನಲ್ಲಿ ಸಿಕ್ಕ ಸಿಕ್ಕಲ್ಲೆ ಹೊರಹುಮ್ಮುವ ನೀರಿನ ಒರತೆಯಂತೆಯೇ ಕ್ಷಣ ಕ್ಷಣಕ್ಕೂ ಹಾಸ್ಯದ ಝರಿ ಉಗಮವಾಗುತ್ತಲೇ ಇತ್ತು..
 |
ಮಹಿಷಾಸುರ |
 |
ಬಕಾಸುರಾಸ್ |
 |
ಕಸ್ತೂರಿ ನಿವಾಸದವರು |
 |
ಒಂದೇ ತಟ್ಟೆ ಮೂರು ಬಾಯಿ |
 |
ಎತ್ತಿಕೋ ಚಳುವಳಿ |
 |
ಕಷ್ಟ ಪಟ್ಟು ಎತ್ತಿಕೋ ಚಳುವಳಿ |
 |
ಅಪ್ಪ ಮಗನ ಜುಗಲ್ ಬಂದಿ |
 |
ಲೆಕ್ಕ ಬಿಡಿಸಿದ ಪ್ರವೀಣ್ ಮಾಸ್ತರು |
 |
ಬಿಡಿಸಿದ ಲೆಕ್ಕವನ್ನು ವಿವರಿಸಿದ ಮಲ್ಲೇಶ್ ಸಾರು |
ಎಷ್ಟೋ ಬಾರಿ ನಮ್ಮ ಅಬ್ಬರದ ನಗು ಕಾರ್ಯಕ್ರಮದ ಲಹರಿಗೆ ಅಡಚಣೆಯಾಗಿ. ಅಲ್ಲಿದ್ದವರು ಕೈಯೆತ್ತಿ.. ಸನ್ನೆ ಮಾಡಿ ನಿಶ್ಯಬ್ಧ ಎಂದು ಹೇಳಿದ್ದುಂಟು.. ಆದರೆ ಹರಿಯುವ ನೀರಿಗೆ ಯಾರು ಹೊಣೆ.. ಹಾರುವ ಹಕ್ಕಿಗೆ ಎಲ್ಲಿ ಮನೆ.. ಎಂಥ ಮರುಳಯ್ಯ ಇದು ಎಂಥಾ ಮರುಳು ಎನ್ನುವ ಹಾಗೆ ಆ ಕ್ಷಣಕ್ಕೆ ಸುಮ್ಮನಾದರೂ.. ಮತ್ತೆ ನಲ್ಲಿಯ ನೀರು ಜೋರಾಗಿ ನುಗ್ಗಿ ಬರುವ ಹಾಗೆ ಮತ್ತೆ ಶುರುವಾಗುತ್ತಿತ್ತು ನಮ್ಮ ತರಲೆಗಳು..
ಅಲ್ಲಿದ್ದ ಫಲಕಗಳು ಹಾಸ್ಯಕ್ಕೆ ಅಡಿಪಾಯ ಹಾಕಿದ್ದವು.. ಅದನ್ನೇ ಪ್ರಾಪರ್ಟಿಯಾಗಿ ಉಪಯೋಗಿಸಿಕೊಂಡು ಹಲ್ಲು ಬಿಡಲು ನೂರಾರು ಕಾರಣಗಳು ಸಿಕ್ಕಿದವು.. ಊಟ ಮಾಡುವಾಗ ತರಲೆ, ಕೂತಿದ್ದಾಗ ತರಲೆ..ಹೀಗೆ ಸಾಗಿತ್ತು ನಮ್ಮ ಪಯಣ..
ನಿಮಿಷಾಂಬ ದೇವಾಲಯ ಹತ್ತಿರದಲ್ಲಿಯೇ ಇದೆ.. ಹೋಗಿ ಬರೋಣ ಅಂತ ಹೊರಟೆವು.. ಆದರೆ ಆ ತಾಯಿ ತನ್ನ ಒಡಲಲ್ಲಿ ಈ ಭಕ್ತರಿಗೆ ಇಟ್ಟುಕೊಂಡಿದ್ದ ಪ್ರಸಾದ ನಮಗೆ ಕಂಡಿರಲಿಲ್ಲ..
ದೇವಸ್ಥಾನಕ್ಕೆ ಹೋದೆವು. ದರುಶನ ಪಡೆದೆವು.. ತಾಯಿಗೆ ನಮಿಸಿ.. ಮನದಲ್ಲಿದ್ದ ಅರ್ಜಿಗಳನ್ನು ಗುಜರಾಯಿಸಿ.. ಹೊರಕ್ಕೆ ಬಂದೆವು. .. ಅಲ್ಲೊಬ್ಬ Voot ಅಪ್ಲಿಕೇಶನ್ ನಲ್ಲಿ ಬಿಗ್ ಬಾಸ್ ನೋಡುತ್ತಿದ್ದವ ಅಚಾನಕ್ ಆಗಿ.. ಲೋ ಓಡ್ರಪ್ಪ.. ತಮಿಳುನಾಡಿನಲ್ಲಿ ಪ್ರವಾಹ ಬತ್ತೈತಂತೆ ಅಂದಾಗ.. ನಾವು ಸುಮ್ಮನೆ ಅಯ್ಯೋ ತಲೆ ಕೆಟ್ಟಿರಬೇಕು ಆತನಿಗೆ ಅಂದು ಕೊಂಡೆವು....ತಮಿಳುನಾಡಿನಲ್ಲಿ ಪ್ರವಾಹ ಬಂದರೆ ನಾವ್ಯಾಕೆ ಓಡಬೇಕು ಎನ್ನುವುದು ನಮ್ಮ ಲಾಜಿಕ್!!!
ನದಿ ಹತ್ತಿರ ಒಂದು ಸೆಲ್ಫಿ ಅಂತ ನಿರ್ಧಾರಮಾಡಿದೆವು..
ಸರಿ ಎಲ್ಲರೂ ನದಿಯ ಕಡೆಗೆ ನೆಡೆದೆವು.. ಮೊಬೈಲ್ ನೋಡುತ್ತಿದ್ದವ.. ಬ್ಯಾಡ ಕನ್ರಲಾ.. ನೆರೆ ಬತ್ತೈತೆ.. ಕಾವೇರಿ ನದಿಯಲ್ಲಿ ಪ್ರವಾಹ ಬತ್ತೈತೆ... ಅಂದಾಗಲೂ ನಾವು ತಲೆ ಕೆಡೆಸಿಕೊಳ್ಳದೆ.. ಮಳೆ ಇಲ್ಲ ಮುಸುಡಿ ಇಲ್ಲ.. ಪ್ರವಾಹ ಎಲ್ಲಿ ಬತ್ತೈತೆ ಎಂದುಕೊಂಡು .. ಸಮಯವಿದ್ದಿದ್ದರೆ ತೆಪ್ಪದಲ್ಲಿ ಒಂದು ಸುತ್ತು ಹೋಗಬಹದಿತ್ತು ಅಂದು ಕೊಂಡೆವು ಆದರೆ ಸಮಯವಿರಲಿಲ್ಲ..
ಅಚಾನಕ್ ಆಗಿ ನೀರಿನ ಮಟ್ಟ ಏರಿತು.. ನಮ್ಮ ಮಲ್ಲೇಶ ಮತ್ತು ನಾಗರಾಜ್ ಜೊತೆಯಲ್ಲಿ ಪ್ರವೀಣ್ ನದಿಯಿಂದ ಒಬ್ಬರನ್ನು ಎಳೆದು ದಡಕ್ಕೆ ತಂದರು..
ಯಾರವಳು.. ಯಾರವಳು?
ಆ ವೀರ ವನಿತೆ ಆ ಲಕ್ಷ್ಮವ್ವ
ನಿಮಿಶಾಂಬ ಮರೆಯದ ಲಕ್ಷಮ್ಮವ್ವ
ಕನ್ನಡ ನಾಡಿನ ವೀರ ರಮಣೀಯ
ಪದಕಮ್ಮಟದ ಸ್ವಾಗತಕಾರಣಿಯ ಚರಿತೆಯ ನಾನು ಹಾಡುವೆ..
 |
ನೋಯದೆ ನೆಂದ ತಂಡ |
ತಲೆ ಮೇಲೆ ಏನೋ ಬಿತ್ತು.. ನೋಡಿದರೆ ತನ್ನ ಬಟ್ಟೆಯಂತೆ ಮುಖವನ್ನು ಕೆಂಪಗೆ ಮಾಡಿಕೊಂಡಿದ್ದ ಲಕ್ಷ್ಮಿಪ್ರಿಯ ಅಲಿಯಾಸ್ ಡಿಟಿಪಿ ಒನಕೆ ಓಬವ್ವನಿಗಿಂತ ರುದ್ರವ್ವ ಆಗಿದ್ದಳು ಎಂಬಲ್ಲಿಗೆ ಪದಕಮ್ಮಟದ ಈ ಲೇಖನ ಸಮಾಪ್ತಿಯಾಯಿತು!!!